ಭಯೋತ್ಪಾದಕ ದಾಳಿಗೆ ಇಬ್ಬರು ಕನ್ನಡಿಗರು ಸೇರಿ ಮಂದಿ ಬಲಿ
ಕಾಶ್ಮೀರ ಪಹಲ್ಗಾಮ್: ಭಯೋತ್ಪಾದಕ ದಾಳಿಗೆ ಇಬ್ಬರು ಕನ್ನಡಿಗರು ಸೇರಿ ಮಂದಿ ಬಲಿ
ಶ್ರೀನಗರ. ಏ.23: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದಾರೆ.
ಬೇಸಿಗೆ ಪ್ರವಾಸಕ್ಕೆಂದು ಕಣಿವೆ ರಾಜ್ಯ ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ಮಂಗಳವಾರ ಭೀಕರ ನರಮೇಧ ನಡೆಸಿದ್ದಾರೆ.
ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದಾರೆ.
ಮೃತ ಕನ್ನಡಿಗರನ್ನು ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಎಂದು ಗುರುತಿಸಲಾಗಿದೆ. ಮೃತರಲ್ಲಿ ಇಬ್ಬರು ವಿದೇಶಿಯರು ಕೂಡಾ ಇದ್ದಾರೆ.