ಬೆಂಗಳೂರು: ಪಹಲ್ಗಾಮ್ ಜಿಲ್ಲೆಯ ಬೈಸರನ್ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದಾರೆ.
ಮೃತ ಕನ್ನಡಿಗರನ್ನು ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಮತ್ತು ಮಧುಸೂದನ್ ಎಂದು ಗುರುತಿಸಲಾಗಿದೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತಕ್ಕೆ ಹಿಂದಿರುಗಿದ್ದಾರೆ.