ಗೋಕಾಕ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು

1 Min Read

ಮಾರ್ಕಂಡೇಯ ನದಿ, ಹಿಡಕಲ್‌ ಡ್ಯಾಂ ಸೇರಿ ಘಟಪ್ರಭಾ ನದಿಗೆ 51185 ಕ್ಯೂಸೆಕ್ ನೀರು ಹರಿದುಬರುತ್ತಿದೆ.
ಚಂದನನಾಡು ಕನ್ನಡಿಗರ ಧ್ವನಿ .ಗೋಕಾಕ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು

ಗೋಕಾಕ ಪಟ್ಟಣದಲ್ಲಿ ಭಾರಿ ಮಳೆಯಿಂದ ಪ್ರವಾಹದ ಭೀತಿ ಎದುರಾಗಿದೆ. ಘಟಪ್ರಭಾ, ಹಿರಣ್ಯಕೇಶಿ ಮತ್ತು ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿವೆ. ಲೋಳಸೂರ ಸೇತುವೆ ಮುಳುಗಡೆಯಾಗಿದೆ. ಶಿಂಗಳಾ ಪೂರ ಗ್ರಾಮದ ಸೇತುವೆ ಜಲಾವೃತವಾಗಿದೆ. ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮನೆ ಕುಸಿದು ಮಹಿಳೆ ಮೃತ ಪಟ್ಟಿದ್ದು, ಇಬ್ಬರು ಗಾಯ ಗೊಂಡಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ ಪರಿಹಾರಕ್ಕೆ ಸೂಚಿಸಿದ್ದಾರೆ.

 

ಗೋಕಾಕ: ಭಾರಿ ಮಳೆಯಿಂದ ಘಟಪ್ರಭಾ, ಹಿರಣ್ಯಕೇಶಿ ಮತ್ತು ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿದ್ದು ಗೋಕಾಕ ನಗರಕ್ಕೆ ಪ್ರವಾಹದ ಆತಂಕ ಎದುರಾಗಿದೆ.

ಘಟಪ್ರಭಾ ನದಿಗೆ ಸದ್ಯ ಹಿಡಕಲ್‌ ಜಲಾಶಯ, ಹಿರಣ್ಯಕೇಶಿ, ಮಾರ್ಕಂಡೇಯ ನದಿ ಹಾಗೂ ಬಳ್ಳಾರಿ ನಾಲಾದಿಂದ 56 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆ ಘಟಪ್ರಭಾ ನೀರಿನಲ್ಲಿ, ಹಿಡಕಲ್‌ ಡ್ಯಾಂಗೆ ಸಂಪರ್ಕ ಕಲ್ಪಿಸುವ ಚಿಕ್ಕಹೊಳಿ ಸೇತುವೆ ಮಾರ್ಕಂಡೇಯ ನದಿ ನೀರಿನಲ್ಲಿ ಮುಳುಗುವ ಹಂತದಲ್ಲಿದೆ. ಶಿಂಗಳಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಿಂಗಳಾಪೂರ ಬ್ರಿಡ್ಜ್‌ ಕಂ ಬ್ಯಾರೇಜ್‌ ಮುಳುಗಡೆಯಾಗಿದೆ. ಚಿಗಡೊಳ್ಳಿ, ಹಡಗಿನಾಳ, ಉದಗಟ್ಟಿ ಸೇರಿ ಇತರೆ ಸೇತುವೆಗಳು ಪ್ರವಾಹದಿಂದಾಗಿ ಮುಳುಗಡೆಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ.

ಮಳೆ ಇದೇ ರೀತಿ ಮುಂದುವರಿದರೆ ಗೋಕಾಕ ನಗರದ ದಾಳಂಬರಿ ತೋಟ, ಕುಂಬಾರ ಗಲ್ಲಿ, ಉಪ್ಪಾರ ಗಲ್ಲಿ ಸೇರಿದಂತೆ ಇತರ ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ

 

 

 

 

 

Share This Article
Leave a Comment

Leave a Reply

Your email address will not be published. Required fields are marked *

error: Content is protected !!