ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಭ್ರಮಾಚರಣೆಯಲ್ಲಿ ತೊಡಗಲಿದ್ದಾರೆ. ಇನ್ನು ರಾಜ್ಯದ ಬಿಜೆಪಿ ನಾಯಕರು ಸೇರಿ ಹಲವು ಗಣ್ಯರು ಭಾರತವನ್ನು ಪ್ರತಿನಿಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭ ಕಾಮನೆಗಳನ್ನು ಕೋರಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಇಂದು 75ನೇ ವರ್ಷದ ಜನ್ಮದಿನದ ಸಂಭ್ರಮ. ಹೀಗಾಗಿ ದೇಶದ ಮೂಲೆ ಮೂಲೆಗಳಿಂದ ಪ್ರಧಾನಿಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.ಇನ್ನು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರೇ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಅಲ್ಲದೆ ಪ್ರಧಾನಿ ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಭ್ರಮಾಚರಣೆಯಲ್ಲಿ ತೊಡಗಲಿದ್ದಾರೆ. ಇನ್ನು ರಾಜ್ಯದ ಬಿಜೆಪಿ ನಾಯಕರು ಸೇರಿ ಹಲವು ಗಣ್ಯರು ಭಾರತವನ್ನು ಪ್ರತಿನಿಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭ ಕಾಮನೆಗಳನ್ನು ಕೋರಿದ್ದಾರೆ.
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂಬುದಾಗಿ ಸಿಎಂ ಬಿಎಸ್‌ವೈ ಶುಭ ಹಾರೈಸಿದ್ದಾರೆ.

