ವೀರಶೈವ-ಲಿಂಗಾಯತ ಏಕತಾ ಸಮಾವೇಶದಲ್ಲಿ ಸಾವಿರಾರು ಸ್ವಾಮೀಜಿಗಳು ಒಂದೇ ಎಂಬ ಸಂದೇಶ

2 Min Read

ಹುಬ್ಬಳ್ಳಿ: ರಾಜ್ಯ ಸರ್ಕಾರ ಸೆ. 22 ‘ ರಿಂದ ಜಾತಿಗಣತಿಗೆ ಮುಂದಾಗಿ : ರುವ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ‘ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 1 ‘ವೀರಶೈವ-ಲಿಂಗಾಯತ ಏಕತಾ ಸಮಾವೇಶ’ದಲ್ಲಿ ಪಂಚಪೀಠಾಧಿಶ್ವರರ ಆದಿ ‘ ಯಾಗಿ ಸಾವಿರಾರು ಗುರು-ವಿರಕ್ತ ಸ್ವಾಮೀಜಿ ಗಳು ಪಾಲ್ಗೊಂಡು ನಾವೇಲ್ಲರೂ ಒಂದು ಎಂದು ಒಗ್ಗಟ್ಟು ಪ್ರದರ್ಶಿಸಿದರು. ಇದಕ್ಕೆ ನೆಹರೂ ಮೈದಾನ ‘ ದಲ್ಲಿ ಸೇರಿದ್ದ ಸಮುದಾಯದ ಲಕ್ಷಾಂತ ಜನರು ‘ ಸಾಕ್ಷಿಯಾಗಿ ವೀರಶೈವ ಲಿಂಗಾಯತ ಎರಡೂ ಒಂದೇ ಎಂಬ ಸಂದೇಶ ಸಾರಿದರು

ಈ ವೇಳೆ ಮಾತನಾಡಿದ ರಂಭಾ ಪುರಿ ಪೀಠದ ವೀರಸೋಮೇಶ್ವರ ಶಿವಾಚಾ ರ್ಯ ಜಗದ್ಗುರುಗಳು, ಸಂವಿಧಾನದಲ್ಲಿ 6 ‘ ಧರ್ಮಗಳಿಗೆ ಮಾನ್ಯತೆ ನೀಡಲಾಗಿದೆ. ವೀರಶೈವ – ಲಿಂಗಾಯತ ಸ್ವತಂತ್ರ ಧರ್ಮವಾಗಬೇಕು ಎಂದು ಪ್ರಯತ್ನ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರ ಇನ್ನೂ ಮಾನ್ಯತೆ ನೀಡಿಲ್ಲ. ಹೀಗಿರು ‘ ವಾಗ ಈ ಬಗ್ಗೆ ಕಾನೂನು ತಜ್ಞರ ಸಲಹೆ ‘ ಪಡೆದು ಧರ್ಮದ ಕಾಲಂನಲ್ಲಿ ಏನೆಂದು ನಮೂದಿಸಬೇಕು ಎಂಬುದನ್ನು ಅಖಿಲ ಭಾರತ : ವೀರಶೈವ ಮಹಾಸಭಾ ನಿರ್ಧರಿಸಬೇಕು ಎಂದು ‘ಸಲಹೆ ನೀಡಿದರು.

ಎಲ್ಲರೂ ಇದೇ ರೀತಿ ಒಂದಾಗಿ ಹೋದ ರೆ ಸಮಾಜಕ್ಕೆ ಉಜ್ವಲ ಭವಿಷ್ಯವಿದೆ ಎಂದರು. ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಮಾತ

ನಾಡಿ, ಇದು ಪ್ರಥಮ ಸಮಾವೇಶ ಆಗಿರುವುದ ರಿಂದ ಯಾವುದೇ ನಿರ್ಣಯ ತೆಗೆದುಕೊಳ್ಳುವು ದಿಲ್ಲ. ನಮ್ಮ ಸಮುದಾಯದ ಗಣ್ಯರ ಜತೆಯಲ್ಲಿ ಚರ್ಚಿಸಿ ಮುಂದಿನ ಸಮಾವೇಶಗಳಲ್ಲಿ ನಿರ್ಣಯ ತೆಗೆದುಕೊಳ್ಳುತ್ತೇವೆ. ಈ ಸಮಾವೇಶದಲ್ಲಿ ವೀರಶೈವ ಲಿಂಗಾಯತ ಒಂದೇ ಎಂಬ ನಿರ್ಣಯ ಮಾತ್ರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ವೀರಶೈವ ಲಿಂಗಾಯತ ಸಮಾಜದ ಏಕತೆಗಾಗಿ ಸಮಾನವಾಗಿ ಕುಳಿತುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂಬ ಸಂದೇಶವನ್ನು ಪಂಚ ಪೀಠಾಧಿಪತಿಗಳು ನೀಡಿದ್ದಾರೆ. ಸಮುದಾಯದ ವರು ನಾವೇಲ್ಲರೂ ಒಂದೇ ಎಂಬುದನ್ನು ಮರೆಯಬೇಡಿ ಎಂದರು.

ತುಮಕೂರು ಸಿದ್ಧ ಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಇಲ್ಲಿ ಸೇರಿ ರುವುದು ಶಕ್ತಿ ಪ್ರದರ್ಶನವಲ್ಲ. ಭಕ್ತಿ ಪ್ರದರ್ಶನ. ಈ ರೀತಿಯ ವಾತಾವರಣ ಹೆಚ್ಚುತ್ತಾ  ಹೋಗಬೇಕಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *

error: Content is protected !!