Pahalgam Terrorist Attack:
ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು (Pahalgam Terrorists attack) ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ.
ದಾಳಿಯಲ್ಲಿ ಪ್ರವಾಸಿಗರು ಮೃತರಾಗಿರುವುದಕ್ಕೆ ಆರ್ಎಸ್ಎಸ್ ಸಂತಾಪ ಸೂಚಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರ ಅಗತ್ಯ ಸಹಾಯ ಮಾಡಬೇಕೆಂದು ಹೇಳಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ಚೀಟ್ ಮಾಡಿದ ಆರ್ಎಸ್ಎಸ್,
” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ದುಃಖಕರ. ಘಟನೆಯಲ್ಲಿ ಮಡಿದ ಎಲ್ಲರಿಗೂ ನಾವು ಗೌರವ ಸಲ್ಲಿಸುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇವೆ.”